ಹೈದರಾಬಾದ್: ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಕೆ.ಚಂದ್ರಶೇಖರ್ ರಾವ್(K Chandrashekar Rao) ವಿರುದ್ಧ ಭ್ರಷ್ಟಾಚಾರ(Corruption) ಆರೋಪ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಜಯಶಂಕರ್ ಭೂಪಲಪಲ್ಲಿಯಲ್ಲಿ(Jayashankar Bhupalpally) ಈ ಘಟನೆ ನಡೆದಿದೆ. ಕೊಲೆಯಾಗಿರುವ ವ್ಯಕ್ತಿಯನ್ನು ಎನ್. ರಾಜಲಿಂಗಮೂರ್ತಿ ಎಂದು ಗುರುತಿಸಲಾಗಿದೆ.
ಕಾಳೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾಜಿ ಸಿಎಂ ಮತ್ತು ಇತರರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ರಾಜಲಿಂಗಮೂರ್ತಿ ಬುಧವಾರ ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಭೂ ವಿವಾದದ ಹಿನ್ನೆಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಕಂಬಗಳು ಮುಳುಗಿದ ನಂತರ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜಲಿಂಗಮೂರ್ತಿ ಕೋರ್ಟ್‌ಗೆ ಮೊರೆ ಹೋಗಿದ್ದರು.