ಬೆಂಗಳೂರು: ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ನಗರದ ಕೋರಮಂಗಲದಲ್ಲಿ (Koramangala) ಈ ಅಮಾನವೀಯ ಘಟನೆ ನಡೆದಿದೆ. ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯಿರುವ ಖಾಸಗಿ ಹೋಟೆಲ್‌ನ (Private Hotel) ಟೆರೆಸ್ ಮೇಲೆ ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಮಹಿಳೆಯು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಕಾಮುಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಒಂದು ತಿಂಗಳ ಹಿಂದೆಯಷ್ಟೇ ನಗರದ ಕೆ.ಆರ್ ಮಾರ್ಕೆಟ್‌ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗುತ್ತಿದೆ.