ಬೆಂಗಳೂರು: ಕನ್ನಡದಲ್ಲಿ (Kannada) ಮಾತನಾಡು ಎಂದಿದ್ದಕ್ಕೆ ನಿರ್ವಾಹಕರೊಬ್ಬರ (Conductor) ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.
ನಿರ್ವಾಹಕ ಮಹಾದೇವ್ ಹುಕ್ಕೇರಿ ಮೇಲೆ ಪೋಕ್ಸೋ ಪ್ರಕರಣ (POCSO Case) ದಾಖಲಾಗಿದೆ. ಬಸ್ ನಲ್ಲೇ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕನ್ನಡ ಮಾತನಾಡಿ ಎಂದಿದ್ದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ನಿರ್ವಾಹಕ ಮಹಾದೇವ್ ಆರೋಪಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆ ದೂರನ್ನಾಧರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಿರ್ವಾಹಕ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ರಾತ್ರೋರಾತ್ರಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ತುಂಬಿದ್ದ ಬಸ್‌ನಲ್ಲಿ ಬಾಲಕಿಯನ್ನ ಕೆಟ್ಟ ದೃಷ್ಟಿಯಿಂದ ನೋಡಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾದೇವ್, ನನಗೆ ದೂರು ನೀಡಿದ ಹುಡುಗಿಯಷ್ಟು ಪ್ರಾಯದ ಮಗಳಿದ್ದಾಳೆ. ಪ್ರಕರಣದ ದಿಕ್ಕು ತಪ್ಪಿಸಲು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಬೇಸರಿಸಿಕೊಂಡಿದ್ದಾರೆ.