ದಾವಣಗೆರೆ: ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಬರೋಬ್ಬರಿ 25 ಲಕ್ಷ ರೂ.ನಷ್ಟು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ (Davanagre) ಡೆಂಟಲ್ ಕಾಲೇಜ್ ರಸ್ತೆಯ ಹೋಟೆಲ್ ನಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 26 ಜನರನ್ನು ವಶಕ್ಕೆ ಪಡೆದಿದ್ದಾರೆ. ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡಿಸಲಾಗುತ್ತಿತ್ತು ಎನ್ನಲಾಗಿದೆ. ದಾಳಿಯಲ್ಲಿ ಅಡ್ಡೆಯಲ್ಲಿದ್ದ 24,86,500 ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಆದರೆ, ಆರೋಪಿಗಳು ಯಾರು ಎಂಬುವುದು ಮಾತ್ರ ತಿಳಿದು ಬಂದಿಲ್ಲ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.