ಹಾಸನ: ಮಹಿಳೆಯೊಬ್ಬರ ಮೇಲೆ ವಿದ್ಯುತ್ ಕಂಬ ಮುರಿದುಬಿದ್ದಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಸಕಲೇಶಪುರದ (Sakleshpura) ಗಾಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ಈ ಕಂಬ ಮಹಿಳೆಯ ಮೇಲೆ ಬಿದ್ದಿದ್ದು, ಶಾರದ (45) ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆಯು ಮನೆಯಿಂದ ಹೊರಗೆ ಬಂದ ಸಂದರ್ಭದಲ್ಲಿ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ. ಹೀಗಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಿಳೆಯು ಜಿಲ್ಲಾಸ್ಪತ್ರೆಯ ಐಸಿಯುವಿಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯುತ್ ಕಂಬ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಬದಲಿಸುವಂತೆ ಗ್ರಾಮಸ್ಥರು ಹಲವು ಬಾರಿ ಚೆಸ್ಕಾಂಗೆ (CESCOM) ಮನವಿ ಮಾಡಿದ್ದರು. ಆದರೆ ವಿದ್ಯುತ್ ಕಂಬ ಬದಲಿಸದೇ ಚೆಸ್ಕಾಂ ಅಧಿಕಾರಿಗಳು ಹಾಗೂ ನೌಕರರು ನಿರ್ಲಕ್ಷ್ಯ ವಹಿಸಿದ್ದರು. ಪರಿಣಾಮವಾಗಿ ಮಹಿಳೆ ಗಾಯಗೊಳ್ಳುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೇ, ಇದಕ್ಕೆ ಅಧಿಗಳು ಹಾಗೂ ಸಿಬ್ಬಂದಿ ಕಾರಣ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.