ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಇಂದು ರಾಜ್ಯದಲ್ಲಿ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ತುಮಕೂರಿನಲ್ಲಿ 10 ನೇ ತರಗತಿ ವಿದ್ಯಾರ್ಥಿ ಹಾಗೂ ಕಲಬುರಗಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ತುಮಕೂರಿನಲ್ಲಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಭೈರಾಪುರ ಗ್ರಾಮದ ರಾಹುಲ್ (16) ಎಂಬ ವಿದ್ಯಾರ್ಥಿ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾನೆ.
ಶುಕ್ರವಾರ ರಾತ್ರಿ 9:30ರ ಸುಮಾರಿಗೆ ವಿದ್ಯಾರ್ಥಿ ರಾಹುಲ್ ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕೂಡಲೇ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮತ್ತೊಂದು ಪ್ರಕರಣದಲ್ಲಿ ಕಲಬುರಗಿಯಲ್ಲಿ ರವಿಕುಮಾರ್ (19) ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘತಕ್ಕೆ ಬಲಿಯಾಗಿದ್ದಾನೆ. ರವಿ ಕುಮಾರ್ ಮೂಲತಃ ಕಲಬುರಗಿಯ ಗಂಗಾನಗರ ನಿವಾಸಿಯಾಗಿದ್ದು, ಜಿಲ್ಲೆಯ ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ. ಆದರೆ ಇಂದು ಬೆಳಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.