ತುಮಕೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ (Micro Finance Harassment) ಹೆಚ್ಚಾಗುತ್ತಿದ್ದಂತೆ ಅದನ್ನು ತಡೆಯಲು ರಾಜ್ಯ ಸರ್ಕಾರ (Karnataka government) ಸುಗ್ರೀವಾಜ್ಞೆ (Ordinance) ಹೊರಡಿಸಿದೆ. ಆದರೂ ಕಿರುಕುಳಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ ಎನ್ನಲಾಗುತ್ತಿದೆ. ಈಗ ಗೃಹ ಸಚಿವರ (Home minister) ಜಿಲ್ಲೆಯಲ್ಲೇ ಫೈನಾನ್ಸ್ ನವರ ಕಿರುಕುಳಕ್ಕೆ ಇಬ್ಬರು ಬಲಿ (Self Harming)ಯಾಗಿರುವ ಘಟನೆ ವರದಿಯಾಗಿವೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಓರ್ವ ಆಟೋ ಚಾಲಕ ಹಾಗೂ ಓರ್ವ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಂಜನಮೂರ್ತಿ (35) ಹಾಗೂ ಅಜೀಜ್ ಉನಿಸಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ. ಫೈನಾನ್ಸ್ ಸಂಸ್ಥೆ ಕಿರುಕುಳದ ಕುರಿತು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ. ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ. ಈ ಕುರಿತು ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಣಿಗಲ್ ತಾಲೂಕಿನ ಕುತ್ತಿಪುರದಲ್ಲಿ ಮಹಿಳೆ ಅಜೀಜ್ ಉನಿಸಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಮದುವೆಗೆ ಅಜೀಜಾ 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆಶೀರ್ವಾದ, ಸೂರ್ಯೋದಯ ಬಜಾಜ್ ಸೇರಿದಂತೆ ವಿವಿಧ ಫೈನಾನ್ಸ್‌ಗಳಿಂದ ಉನ್ನಿಸಾ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಆದರೆ, ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಅವಮಾನ ಮಾಡಿದ್ದಕ್ಕೆ ಅವಮಾನ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.