ಬೆಂಗಳೂರು: ಇಲ್ಲಿನ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್.ಟಿ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯರಾತ್ರಿ 1.30ರ ಸುಮಾರಿಗೆ ಈ ಕೊಲೆ ನಡೆದಿದೆ. ಕೊಲೆಯಾಗಿರುವ ವ್ಯಕ್ತಿ ಅಶೋಕನಗರ ಠಾಣೆ ರೌಡಿಶೀಟರ್ ಆಗಿದ್ದ. ಈತನ ಮೇಲೆ ಸುಮಾರು ಹನ್ನೊಂದು ಕೇಸ್ ಗಳಿವೆ. ರಾತ್ರಿ ವೇಳೆ ಆನೆಪಾಳ್ಯದಲ್ಲಿರುವ ಮನೆಗೆ ಹೋಗುವಾಗ ಕಾರು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.
ಕೊಲೆಯಾಗಿರುವ ಆರೋಪಿ ಹನ್ನೊಂದು ಪ್ರಕರಣಗಳಲ್ಲಿ ಮಾರಣಾಂತಿಕ ಹಲ್ಲೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. 2014ರಿಂದಲೂ ಈತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಈತ ರಾಜಕೀಯದಲ್ಲಿ ಇರಲಿಲ್ಲ. ಈತನ ಅಣ್ಣ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ. ಈತ ಯಾವ ರಾಜಕೀಯ ಮುಖಂಡ ಅಲ್ಲ. 2022ರಿಂದ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ. ಆದರೆ ತನ್ನ ಏರಿಯಾದಲ್ಲಿ ಹವಾ ಮೆಂಟೈನ್ ಮಾಡುತ್ತಿದ್ದ ಎಂದಿದ್ದಾರೆ.
ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.