ದಾವಣಗೆರೆ : ಯತ್ನಾಳ್ ದು ಲೂಸ್ ಟಾಕಿಂಗ್. ಅವರಿಗೆ ಬೈಯ್ಯುವುದೇ ಕೆಲಸವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಭಾರತೀಯ ಜನತಾ ಪಾರ್ಟಿ ಮೇಲೆ ಅಭಿಮಾನ ಇದ್ದಿದ್ದರೆ, ಹಾದಿ ಬೀದಿಯಲ್ಲಿ ನಿಂತು ಮಾತನಾಡಬಾರದು. ಶಿಸ್ತು ಸಮಿತಿಯ ಅಧ್ಯಕ್ಷರು ನೋಟಿಸ್ ನೀಡಿದಾಗ ಫೇಕ್ ನೋಟಿಸ್ ಅಂತಾ ಹೇಳಿದ್ದಾರೆ. ವಿಜಯೇಂದ್ರ ಬಗ್ಗೆ ಮಾತನಾಡಲು ನಿನಗೆ ಯಾವ ನೈತಿಕಥೆ ಇದೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಬಲೇಶ್ವರ ನೀನ್ನ ಕ್ಷೇತ್ರ. ನೀನು ಅಲ್ಲಿಂದ ಸ್ಪರ್ಧೆ ಮಾಡು. ನೀನೇ ಪ್ರಭಾವಿ ಸಚಿವರ ಜೊತೆ ಹೊಂದಾಣಿಕೆ ಮಾಡಿಕೊಂಡು ಕುಟುಂಬ ರಾಜಕಾರಣ ಅಂತಾ ಹೇಳ್ತಾ ಇದ್ದೀಯಾ? ಆದರೆ, ನೀನ್ನ ಮಕ್ಕಳನ್ನು ಸರ್ಕಾರಿ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೆ ಕರೆ ತರುತ್ತಿದ್ದಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಮಾರ್ ಬಂಗಾರಪ್ಪ ನೀನು ಕಾಂಗ್ರೆಸ್ ನಲ್ಲಿ ಅನಾಥ ಶಿಶು ಆಗಿದ್ದೆ. ನಿನಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಯಡಿಯೂರಪ್ಪ ಅವರು. ನಿನ್ನ ಕ್ಷೇತ್ರದಲ್ಲಿ ಪಕ್ಷ ಏನು ಸಂಘಟನೆ ಮಾಡಿದ್ದೀಯಾ? ನೀನು ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತೆ ಅಂತ ಹೇಳ್ತೀಯಾ? ನೀನೇನು ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ. ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮುಂದಿನ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದಿದ್ದಾರೆ. ಅಲ್ಲದೇ, ದಾವಣಗೆರೆಯಲ್ಲಿ ರೇಣುಕಾಚಾರ್ಯ ಬಣದಿಂದ ಯಡಿಯೂರಪ್ಪ ಹುಟ್ಟು ಹಬ್ಬ ಆಚರಿಸುವ ವಿಚಾರವಾಗಿ ಮಾತನಾಡಿದ ಅವರು, ನಮಗೆ ರಾಜ್ಯಾಧ್ಯಕ್ಷರು ಸೂಚನೆ ಕೊಟ್ಟಿದ್ದಾರೆ. ಯಾವುದೇ ಸಮಾವೇಶ ಮಾಡದಂತೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿ ದಿನಾಂಕ ನಿಗದಿ ಮಾಡಿ ಸಮಾವೇಶ ಮಾಡುತ್ತೇವೆ. ಬೆಳಗಾವಿಯಲ್ಲಿ ನಡೆದ ಗಲಾಟೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು. ಕಂಡಕ್ಟರ್ ಮೇಲೆ ಕೇಸ್ ಮಾಡಿದ್ದು ತಪ್ಪು ಎಂದಿದ್ದಾರೆ.