ಚಿಕ್ಕೋಡಿ: ಎರಡು ದಿನಗಳಿಂದ ಬಂದ್ ಆಗಿದ್ದ ಮಹಾರಾಷ್ಟ್ರ ಬಸ್ ಸಂಚಾರ ಮತ್ತೆ ಆರಂಭವಾಗಿದೆ.
ಇಂದಿನಿಂದ ಮತ್ತೆ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭವಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಪುಣೆಯಲ್ಲಿ ಬಸ್ ಗೆ ಮಸಿ ಬಳಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಮತ್ತೆ ಆರಂಭಿಸಲಾಗಿದೆ.
ಬೆಳಗಾವಿ ನಿಪ್ಪಾಣಿ ಮಾರ್ಗವಾಗಿ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಪ್ರತಿ ದಿನ 120 ಟ್ರಿಪ್ ಸಂಚಾರ ನಡೆಯುತ್ತಿತ್ತು. ಈಗ ಯಥಾಸ್ಥಿತಿಯಲ್ಲಿ ಬಸ್ ಸಂಚಾರ ಆರಂಭವಾಗಿದೆ.