ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೊಡರ್ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ “ವೀರ ಕಂಬಳ” ಚಿತ್ರ ಮೂಡಿ ಬರುತ್ತಿದೆ.
ಈಗ ಈ ಚಿತ್ರ ತಂಡವು ಮಹಾಕುಂಭ ಮೇಳದಲ್ಲಿ ಭಾಗಿಯಾಗಿ ಪವಿತ್ರ ಸ್ನಾನ ಮಾಡಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ದ ದೇಸಿ ಕ್ರೀಡೆ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ರಾಧಿಕಾ ಚೇತನ್ ನಟಿಸಿದ್ದಾರೆ.
“ವೀರ ಕಂಬಳ” ಚಿತ್ರದ ನಿರ್ದೇಶಕ ಡಾ. ಎಸ್.ವಿ. ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ಅರುಣ್ ರೈ ತೊಡಾರ್ ಇತ್ತೀಚಿಗೆ ಪ್ರಯಾಗರಾಜ್ ದ ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನ ಮಾಡಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಲಿ ಹಾಗೂ ಕನ್ನಡ – ತುಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ “ವೀರ ಕಂಬಳ” ಚಿತ್ರ ಯಶಸ್ವಿಯಾಗಲಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.