ಬೆಂಗಳೂರು: ಇಲ್ಲಿನ ಮೆಗಾ ಇನ್ಫ್ರಾಸ್ಟ್ರಕ್ಚರ್ ಯೋಜನೆಗಳನ್ನು ನಿರ್ವಹಿಸಲು ಹೊಸ ಸರ್ಕಾರಿ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಸುರಂಗ ರಸ್ತೆಗಳು, ಎಲಿವೇಟೆಡ್ ಕಾರಿಡಾರ್‌ಗಳನ್ನು ನಿರ್ಮಿಸುವುದಕ್ಕಾಗಿಯೇ ನಿಗಮ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಕಸ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸುವಂತೆ ನೋಡಿಕೊಳ್ಳಲು ನಿಗಮ ಸ್ಥಾಪಿಸಲಾಗಿದೆ. ಅದೇ ರೀತಿ ನಗರದ ಹಲವು ಅಭಿವೃದ್ಧಿ ಕಾಮಗಾರಿಗಳ ನಿರ್ಮಾಣಕ್ಕೆ ಹೊಸ ಸಂಸ್ಥೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.
ಮೆಟ್ರೋ, ನೀರು ಮತ್ತು ವಿದ್ಯುತ್ ಸರಬರಾಜು ಸೇವೆಗಳು ಇದ್ದಂತೆ ಬೆಂಗಳೂರಿನಲ್ಲಿ ಪ್ರಮುಖ ರಸ್ತೆ ಕಾಮಗಾರಿಗಳನ್ನು ಸ್ವತಂತ್ರ ಸರ್ಕಾರಿ ಘಟಕವು ನಿರ್ವಹಿಸುವ ರೀತಿ ಸಂಸ್ಥೆ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ನಿಯಮಿತ ಸಂಸ್ಥೆಯಿಂದ BBMPಯ ಪ್ರಮುಖ ಜವಾಬ್ದಾರಿಗಳನ್ನು ಕಡಿಮೆ ಮಾಡಬಹುದು. ಹೊಸ ಘಟಕವನ್ನು ಬೆಂಗಳೂರು ಸ್ಮಾರ್ಟ್ ಮೊಬಿಲಿಟಿ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (B.SMIL) ಅಥವಾ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (B.SIL) ಎಂದು ಹೆಸರಿಸಬಹುದು ಎಂದು ಆರಂಭಿಕ ಚರ್ಚೆ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ನಲ್ಲಿ ಹೊಸ ಎಸ್‌ಪಿವಿಯನ್ನು ಘೋಷಿಸುವ ನಿರೀಕ್ಷೆ ಇದೆ. ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ದಂತೆಯೇ, ಈ ಹೊಸ ಘಟಕ ದೊಡ್ಡ ಪ್ರಮಾಣದ ಯೋಜನೆಗಳನ್ನು ಮಾತ್ರ ನಿರ್ವಹಿಸಲಿದೆ ಎನ್ನಲಾಗುತ್ತಿದೆ.