ಬೆಳಗಾವಿ: ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವನ್ನು ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ತೀವ್ರವಾಗಿ ಖಂಡಿಸಿದ್ದಾರೆ.
ಸೋಮವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವ ಹುಕ್ಕೇರಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಕಂಡಕ್ಟರ್ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ಈ ಘಟನೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿಯಲ್ಲಿ ಬಹಳ ವರ್ಷಗಳಿಂದ ಮರಾಠಿ ಪುಂಡರು ಗಲಾಟೆ ಮಾಡುತ್ತಿದ್ದಾರೆ. ಅವರ ಪುಂಡಾಟಕ್ಕೆ ಕೂಡಲೇ ಕಡಿವಾಣ ಬೀಳಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.