ಹುಬ್ಬಳ್ಳಿ: ರಾಜ್ಯ ಸರ್ಕರ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಹೊರಡಿಸಿದರೂ ನಗರದಲ್ಲಿ ಬಡ್ಡಿ ದಂಧೆಕೋರರಿಗೆ ಕಡಿವಾಣ ಹಾಕಲು ಆಗುತ್ತಿಲ್ಲ. ನಗರದಲ್ಲಿನ ಮನೆಯೊಂದಕ್ಕೆ ನುಗ್ಗಿ ಬಡ್ಡಿ ಹಣ ಕಟ್ಟದ ಹಿನ್ನಲೆಯಲ್ಲಿ ಮನೆಗೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ಮನೆಯೊಂದಕ್ಕೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಭಾರತಿ ದೊಡ್ಡಮನಿ ಎಂಬುವವರ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಭಾರತಿ ದೊಡ್ಡಮನಿ ಕಳೆದ 15 ವರ್ಷಗಳ ಹಿಂದೆ 1 ಲಕ್ಷ ರೂ. ಸಾಲ ಪಡೆದಿದ್ದರು. ಅದಕ್ಕೆ ಇಲ್ಲಿಯವರೆಗೂ ಬಡ್ಡಿ ಕಟ್ಟುತ್ತಿದ್ದರೂ ಕಿರುಕುಳ ಮಾತ್ರ ನಿಂತಿಲ್ಲ ಎನ್ನಲಾಗಿದೆ. ಈಗ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಭಾರತಿ ಮನೆಯಲ್ಲಿದ್ದಾಗ ಬೀಯರ್ ಕುಡಿದು, ಸಿಗರೇಟ್ ಸೇದಿ ದಾಂಧಲೆ ಮಾಡಿ ಕಿರುಕುಳ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಬಡ್ಡಿ ಕಟ್ಟದ ಹಿನ್ನೆಲೆಯಲ್ಲಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.