ಬೆಂಗಳೂರು: ಬೆಂಗಳೂರಿನಲ್ಲಿರುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿ (ಎನ್ಎಎಲ್) 30 ವಿಜ್ಞಾನಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿಜ್ಞಾನಿಗಳು/ ಗ್ರೇಡ್ 4 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಏಳನೇ ವೇತನ ಆಯೋಗದ 11ನೇ ಹಂತದ ಪ್ರಕಾರ ನೇಮಕಗೊಂಡವರಿಗೆ 67,700 ರೂ.ನಿಂದ 2,08,700 ರೂಪಾಯಿವರೆಗೆ ಸಂಬಳ ಸಿಗಲಿದೆ.
ನೇಮಕಾತಿ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಲಿಖಿತ ಪರೀಕ್ಷೆ ಇರುತ್ತದೆ. ಇದಾದ ನಂತರ ಸಂದರ್ಶನ ಮಾಡಲಾಗುತ್ತದೆ. ಸಂದರ್ಶನದಲ್ಲಿ ಶಾರ್ಟ್ ಲಿಸ್ಟ್ ಆದವರ ಮೂಲ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ಮೆಡಿಕಲ್ ಟೆಸ್ಟ್ ಮುಗಿದ ನಂತರ ನೇಮಕಾತಿ ಆದೇಶ ನೀಡಲಾಗುತ್ತದೆ. 30 ಹುದ್ದೆಗಳ ಪೈಕಿ ಸಾಮಾನ್ಯ ವರ್ಗದವರಿಗೆ 14, ಆರ್ಥಿಕವಾಗಿ ಹಿಂದುಳಿದವರಿಗೆ 3, ಒಬಿಸಿ 6 ಹಾಗೂ ಎಸ್ಸಿ, ಎಸ್ಟಿಯವರಿಗೆ 7 ಹುದ್ದೆಗಳನ್ನು ಮೀಸಲಿಡಲಾಗಿದೆ.
ಫೆಬ್ರವರಿ 21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 3ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆ ಸೇರಿ ಹಲವು ದಿನಾಂಕಗಳನ್ನು ಎನ್ಎಎಲ್ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://www.nal.res.in ಗೆ ಭೇಟಿ ನೀಡಬಹುದು.
ವಿದ್ಯಾರ್ಹತೆ ಏನು?
ಎಂಇ, ಎಂ.ಟೆಕ್ ಹಾಗೂ ಪಿಎಚ್.ಡಿ ಅಧ್ಯಯನ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. 32 ವರ್ಷ ವಯಸ್ಸಿನ ಗರಿಷ್ಠ ಮಿತಿಯಾಗಿದೆ. ಎಸ್ಸಿ, ಎಸ್ಟಿ ವರ್ಗದವರಿಗೆ ಐದು ವರ್ಷ, ಒಬಿಸಿಯವರಿಗೆ ಮೂರು ವರ್ಷದ ವಯಸ್ಸಿನ ಸಡಿಲಿಕೆ ಇದೆ.