ಹುಬ್ಬಳ್ಳಿ: ಬಸ್ ನ ಪಾಟಾ ಕಟ್ ಆಗಿ ದುರಂತವೊಂದು ನಡೆದಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಕೆಎಸ್ ಆರ್ ಟಿಸಿ ಬಸ್ ನ ಪಾಟಾ ಕಟ್ ಆದ ಪರಿಣಾಮ ಬಸ್ ಪಲ್ಟಿಯಾಗಿರುವ ಈ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹತ್ತಿರ ನಡೆದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್ ಹುಬ್ಬಳ್ಳಿಯಿಂದ ಸವದತ್ತಿ ಮಾರ್ಗವಾಗಿ ಹೊರಟಿತ್ತು ಎನ್ನಲಾಗಿದೆ.
ಆದರೆ, ಬ್ಯಾಹಟ್ಟಿ ಹತ್ತಿರ ಬಸ್ ನ ಪಾಟಾ ಕಟ್ ಆಗಿ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ. ಹೀಗಾಗಿ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರೇಕುಂಬಿಯ ದೇವಸ್ಥಾನಕ್ಕೆ ಹೊರಟಿದ್ದ ಕೆಲವು ಗಾಯಗೊಂಡಿದ್ದಾರೆ ಎನ್ನಲಾಗಿದೆ.