ಹಾಸನ: ಸಂಸದ ಶ್ರೇಯಸ್ ಪಟೇಲ್ ಅವರು ಅಧಿಕಾರಿಗಳೊಂದಿಗೆ ಶಿರಾಡಿ ಘಾಟ್ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಗುಡ್ಡ ಕುಸಿಯದಂತೆ ಬೇಸಿಗೆಯಲ್ಲೇ ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.
ಸಕಲೇಶಪುರದಿಂದ ಮಾರನಹಳ್ಳಿವರೆಗೆ ಕಾಮಗಾರಿಯನ್ನು ಪರಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಈ ವೇಳೆ ಜೂನ್ ಅಂತ್ಯದೊಳಗೆ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ರಸ್ತೆಯ ಬದಿ ಮಣ್ಣು ಕುಸಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿರಾಡಿಘಾಟ್ ನಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರತಿ ವರ್ಷವೂ ಗುಡ್ಡ ಕುಸಿಯುತ್ತಿದ್ದು, ಅದರಿಂದ ಜನರಿಗೆ ತುಂಬಾ ಅನಾನೂಕುಲ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬೇಸಿಗೆಯಲ್ಲೇ ಅಲರ್ಟ್ ಆಗಿ, ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.