ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಇತಿಹಾಸವು ಸಂಸ್ಕೃತಿ-ನಾಗರಿಕತೆಯ ಕನ್ನಡಿ: ವಿಕ್ರಮ್ ಸಂಪತ್

February 28, 2025
Share on WhatsappShare on FacebookShare on Twitter

ಉಡುಪಿ: ಖ್ಯಾತ ಇತಿಹಾಸ ತಜ್ಞ ವಿಕ್ರಮ್ ಸಂಪತ್‌ ಅವರು, ಇತಿಹಾಸವು ದೇಶದ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಪ್ರತಿಬಿಂಬಿಸುವ ಕನ್ನಡಿ ಎಂದು ಕರೆದು, ಇತಿಹಾಸದ ಮಹತ್ವವನ್ನು ಒತ್ತಿ ಹೇಳಿದರು.

ದಿವಂಗತ ಡಾ. ಪಾದೂರು ಗುರುರಾಜ ಭಟ್ ಅವರ ಜನ್ಮಶತಮಾನೋತ್ಸದ ಅಂಗವಾಗಿ ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಟ್ರಸ್ಟ್, ಉಡುಪಿಯ ಟೌನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದ ದೇಗುಲಗಳು ಮತ್ತು ಪರಂಪರೆಗೆ ಸಂಬಂಧಿಸಿದ ಐತಿಹಾಸಿಕ ನಿರೂಪಣೆಗಳ ಪುನರ್ ಪರಿಶೀಲನೆ ಮತ್ತು ಪುನರ್ ರಚನೆ ಕುರಿತ ಒಳನೋಟವುಳ್ಳ ಚರ್ಚೆ ಮತ್ತು ವಿಶ್ಲೇಷಣೆ ಕಾರ್ಯಕ್ರಮದ ಕೇಂದ್ರ ಬಿಂದುವಾಗಿತ್ತು.
ಕಾರ್ಯಕ್ರಮದಲ್ಲಿ ವಿಕ್ರಮ್ ಸಂಪತ್ ಅವರು, ಐತಿಹಾಸಿಕ ಸಂಶೋಧನೆಗೆ ನೀಡಿದ ಕೊಡುಗೆಗಾಗಿ ಅವರಿಗೆ ಡಾ.ಪಾದೂರು ಗುರುರಾಜ ಭಟ್ ಜನ್ಮ ಶತಮಾನೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇತಿಹಾಸವು ಜನರ ಮನಸ್ಸನ್ನು ರೂಪಿಸುತ್ತದೆ. ಈ ಸತ್ಯವನ್ನು ನಮ್ಮ ವಸಹಾತುಶಾಹಿಗಳು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದರು. ಜಾರ್ಜ್ ಆರ್ವೆಲ್, ‘ಭೂತಕಾಲವನ್ನು ನಿಯಂತ್ರಿಸುವವರು ಭವಿಷ್ಯವನ್ನೂ ನಿಯಂತ್ರಿಸುತ್ತಾರೆ’ ಎಂದಿದ್ದರು’ ಎಂದು ಹೇಳಿದರು.

ಭಾರತದ ಶಿಕ್ಷಣ ಪದ್ಧತಿ ಮೇಲೆ ಮೆಕಾಲೆ ಅವರ ಪ್ರಭಾವವನ್ನು ಉಲ್ಲೇಖಿಸಿದ ಅವರು, ಬ್ರಿಟಿಷರಂತೆ ಯೋಚಿಸುವ ಮತ್ತು ವರ್ತಿಸುವ ಭಾರತೀಯರ ವರ್ಗವನ್ನು ರಚಿಸುವ ಉದ್ದೇಶದಿಂದಲೇ ಭಾರತಕ್ಕೆ ಇಂಗ್ಲಿಷ್ ಭಾಷೆಯನ್ನು ಪರಿಚಯಿಸಲಾಯ ಎಂದು ಹೇಳಿದರು. ಭಾರತದ ಇತಿಹಾಸವು ಹೆಚ್ಚಾಗಿ ದೆಹಲಿ-ಕೇಂದ್ರಿತವಾಗಿ ಉಳಿದಿದೆ. ಪ್ರಾಥಮಿಕವಾಗಿ ರಾಜಧಾನಿಯ ಆಡಳಿತಗಾರರ ಮೇಲೆ ಹೆಚ್ಚಿನ ಆದ್ಯತೆ ನೀಡಿದೆ. ಆದರೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ಪ್ರಮುಖ ಭಾಗಗಳನ್ನು ಮುಖ್ಯವಾಹಿನಿಯ ನಿರೂಪಣೆಗಳಲ್ಲಿ ಕಡೆಗಣಿಸಲಾಗಿದೆ ಎಂದು ಅವರು ವಿಷಾದಿಸಿದರು.

ರಾಣಿ ಅಬ್ಬಕ್ಕ ಅವರ ಉಡುಪು, ಅರಮನೆ ಮತ್ತು ಪರಂಪರೆಯ ಬಗ್ಗೆ ಇಟಾಲಿಯನ್ ಪ್ರವಾಸಿ ಪಿಯೆಟ್ರೋ ಡೆಲ್ಲಾ ವಾಲೆ ಅವರು ಐತಿಹಾಸಿಕ ಬರವಣಿಗೆಗಳನ್ನು ಬರೆದಿದ್ದಾರೆ. ಇಂಥ ದಾಖಲೆಗಳ ಹೊರತಾಗಿಯೂ, ರಾಣಿ ಅಬ್ಬಕ್ಕ ಅವರಂತಹ ಅನೇಕ ವ್ಯಕ್ತಿಗಳ ಬಗ್ಗೆ ಹಲವರಿಗೆ ಇನ್ನೂ ತಿಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 1741ರಲ್ಲಿ ನಡೆದ ಕೋಲಾಚೆಲ್ ಕದನದಲ್ಲಿ ತಿರುವಾಂಕೂರಿನ ರಾಜ ಮಾರ್ತಾಂಡ ವರ್ಮ ಅವರು ಡಚ್ ಈಸ್ಟ್ ಇಂಡಿಯಾ ಕಂಪನಿಯನ್ನು ನಿರ್ಣಾಯಕವಾಗಿ ಸೋಲಿಸಿದರು. ಇದು ಭಾರತದಲ್ಲಿ ಡಚ್ ವಸಾಹತುಶಾಹಿಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ನುಚ್ಚುನೂರು ಮಾಡಿದ ಐತಿಹಾಸಿಕ ಘಟನೆ ಎಂದು ನೆನಪಿಸಿಕೊಂಡರು. ಅಂದು ಅವರು ಜಯಗಳಿಸದಿದ್ದರೆ, ನಾವು ಇಂದು ಕೆಲವು ಸ್ಥಳಗಳಲ್ಲಿ ಡಚ್ ಮಾತನಾಡುತ್ತಿದ್ದೆವು. ಕೇರಳದಲ್ಲಿ ಸಹ, ಇತಿಹಾಸದ ಈ ಅಧ್ಯಾಯದ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ಆರು ಶತಮಾನಗಳ ಕಾಲ ಅಸ್ಸಾಂ ಆಳಿದ ಅಹೋಮ್‌ ರಾಜಮನೆತನದ ಮರೆತುಹೋದ ಪರಂಪರೆಯ ಬಗ್ಗೆ ಪ್ರಸ್ತಾಪಿಸಿ, ಈ ರಾಜವಂಶದ ಬಗ್ಗೆ ನಮ್ಮಲ್ಲಿ ಎಷ್ಟು ಜನರಿಗೆ ತಿಳಿದಿದೆ ಎಂದು ಪ್ರಶ್ನಿಸಿದರು. ಭಾರತದ ಎಲ್ಲಾ ಪ್ರದೇಶಗಳನ್ನು ಪ್ರತಿನಿಧಿಸುವ ಸಮಗ್ರ, ಅಂತರ್ಗತ ಐತಿಹಾಸಿಕ ನಿರೂಪಣೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಅಂತರರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಡಾ. ಸುರೇಂದ್ರನಾಥ ಬೊಪ್ಪರಾಜು ಅವರು, ದೇವಾಲಯದ ವಾಸ್ತುಶಿಲ್ಪ, ಸಂಕೀರ್ಣ ಕೆತ್ತನೆಗಳು ಮತ್ತು ಪ್ರಾಚೀನ ಭಾರತೀಯ ಕುಶಲಕರ್ಮಿಗಳ ಕಲಾತ್ಮಕ ಪಾಂಡಿತ್ಯದ ಕುರಿತು ಆಳವಾದ ವಿಶ್ಲೇಷಣೆಯೊಂದಿಗೆ ಮಾಹಿತಿ ನೀಡಿದರು.

ಪದ್ಮಶ್ರೀ ಪುರಸ್ಕೃತ ಕೆ.ಕೆ. ಮಹಮ್ಮದ್ ಅವರು, ಪ್ರಾಚೀನ ದೇವಾಲಯಗಳ ಸಂರಕ್ಷಣೆ ಮತ್ತು ಜೀರ್ಣೋದ್ಧಾರದ ಕುರಿತು ಮಾತನಾಡಿದರು. ಮಧ್ಯಪ್ರದೇಶದ ಬಟೇಶ್ವರದಲ್ಲಿರುವ, ಆಕ್ರಮಣಗಳಿಂದಾಗಿ ನಾಶವಾವಾಗಿದ್ದ ಸುಮಾರು 7-8ನೇ ಶತಮಾನದ ಗುರ್ಜರ-ಪ್ರತಿಹಾರ ದೇವಾಲಯಗಳ ಪುನರುಜ್ಜೀವನ ಮತ್ತು ಪುನಶ್ಚೇತನಕ್ಕಾಗಿ ತಾವು ಮಾಡಿದ ಪ್ರಯತ್ನಗಳನ್ನು ಅವರು ವಿವರಿಸಿದರು.

ಟ್ರಸ್ಟ್‌ನ ಅಧ್ಯಕ್ಷ ಪ್ರೊ.ಪಿ.ಶ್ರೀಪತಿ ತಂತ್ರಿ ಅವರು ಮಾತನಾಡಿ, ‘ಸ್ವಾತಂತ್ರ್ಯದ ನಂತರದ ಭಾರತೀಯ ಇತಿಹಾಸದ ವಿಕಸನ ಮತ್ತು ಭವಿಷ್ಯದ ಪೀಳಿಗೆಗೆ ಶಿಕ್ಷಣ ನೀಡುವಲ್ಲಿ ನಿಷ್ಪಕ್ಷಪಾತ ದೃಷ್ಟಿಕೋನವನ್ನು ಅಳವಡಿಸಿಕೊಳ್ಳುವ ಅಗತ್ಯದತ್ತ ಕಾರ್ಯಕ್ರಮವು ಗಮನಹರಿಸಿದೆ. ಭಾರತದ ಐತಿಹಾಸಿಕ ಅಸ್ಮಿತೆ ಮತ್ತು ಸಮಕಾಲೀನ ಕಾಲದಲ್ಲಿ ಅದರ ಪ್ರಸ್ತುತತೆಯ ಕುರಿತು ಅರ್ಥಪೂರ್ಣ ಚರ್ಚೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಿದರು.

ಟ್ರಸ್ಟ್‌ನ ಕಾರ್ಯದರ್ಶಿ ವಿಶ್ವನಾಥ ಪಾದೂರು ಮಾತನಾಡಿ, ‘ಭಾರತದ ದೇವಾಲಯ ಪರಂಪರೆ, ಐತಿಹಾಸಿಕ ಸತ್ಯ, ಭಾರತದ ಸಾಂಸ್ಕೃತಿಕ ಅಸ್ಮಿತೆ ರೂಪಿಸುವಲ್ಲಿ ದೇವಾಲಯಗಳ ಪಾತ್ರದ ಕುರಿತು ಅರ್ಥಪೂರ್ಣ ಸಂವಾದವನ್ನು ಏರ್ಪಡಿಸುವುದು ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಟ್ರಸ್ಟ್‌ನ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮವು ಇತಿಹಾಸಕಾರರು, ವಿದ್ವಾಂಸರು, ವಾಸ್ತುಶಿಲ್ಪಿಗಳು ಮತ್ತು ಭಾರತದ ಶ್ರೀಮಂತ ಇತಿಹಾಸದ ಬಗ್ಗೆ ಆಸಕ್ತಿ ಹೊಂದಿರುವ ಉತ್ಸಾಹಿಗಳನ್ನು ಬೆಸೆಯುವ ಕೊಂಡಿಯಾಗಿ ಕಾರ್ಯನಿರ್ವಹಿಸಿತು ಎಂದರು.

ಡಾ.ಮಾಲತಿ ಕೃಷ್ಣಮೂರ್ತಿ ಅವರು, ಶಿಕ್ಷಕ ಮತ್ತು ಪ್ರಾಂಶುಪಾಲರಾಗಿದ್ದ ಗುರುರಾಜ್ ಭಟ್ ಅವರು ತಮ್ಮ ಮಾನವೀಯ ಧೋರಣೆಗೆ ಹೆಸರಾದವರು ಎಂದು ಸ್ಮರಿಸಿದರು. ತರಗತಿಯಲ್ಲಿನ ಅವರ ಪಾಂಡಿತ್ಯ ಪಾಠಗಳು ಹೇಗೆ ಆಳವಾಗಿ ಬೇರೂರಿವೆ ಮತ್ತು ಅವರ ಸರಳತೆ, ಕಠಿಣ ಪರಿಶ್ರಮ ಮತ್ತು ಸಹಾನುಭೂತಿಯು ತಮ್ಮ ಮೇಲೆ ಹೇಗೆ ಶಾಶ್ವತವಾದ ಪ್ರಭಾವ ಬೀರಿತು ಎಂಬುದನ್ನು ಒತ್ತಿಹೇಳಿದರು.

Tags: UdupiVikram Sampat
SendShareTweet
Previous Post

‘ವಿರಳ ಕಾಯಿಲೆಗಳ ಪತ್ತೆಗೆ ವೈದ್ಯರಿಗೆ ನೆರವಾಗಲು ಪೋರ್ಟಲ್ ಆರಂಭಿಸಿದ ಸ್ಟ್ರಾಂಡ್ ಲೈಫ್ ಸೈನ್ಸಸ್

Next Post

ಮಸೀದಿ ಒಳಗೆ ಬಾಂಬ್ ಬ್ಲಾಸ್ಟ್: ಐವರು ಬಲಿ

Related Posts

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!
ರಾಜ್ಯ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

Next Post
ಮಸೀದಿ ಒಳಗೆ ಬಾಂಬ್ ಬ್ಲಾಸ್ಟ್: ಐವರು ಬಲಿ

ಮಸೀದಿ ಒಳಗೆ ಬಾಂಬ್ ಬ್ಲಾಸ್ಟ್: ಐವರು ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat