ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನಗರ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ್ದಾರೆ.
ಹೊರ ವಲಯದ ಹೊನ್ನಾಳಿ ರಸ್ತೆಯಸ್ಸಿನ ಚೌಡಮ್ಮನ ದೇವಸ್ಥಾನದ ಬಳಿ ಪೊಲೀಸರು ಮುತಾಲಿಕ್ ರನ್ನು ತಡೆದಿದ್ದಾರೆ. ಈ ವೇಳೆ ಯಾವುದೇ ಪೂರ್ವ ಸೂಚನೆ ಇಲ್ಲದೆ ಪ್ರವೇಶ ತಡೆದಿದ್ದಕ್ಕೆ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ಪುಸ್ತಕ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಠಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು. ಲವ್ ಜಿಹಾದ್ ಕುರಿತ ಎರಡನೇ ಆವೃತ್ತಿಯ ಬಿಡುಗಡೆಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಪ್ರಮೋದ್ ಮುತಾಲಿಕ್ ಬರುತ್ತಿದ್ದಂತೆ ಅವರ ಭೇಟಿಗೆ ಶಾಸಕ ಎಸ್.ಎನ್. ಚೆನ್ನಬಸಪ್ಪ ಆಗಮಿಸಿದ್ದರು. ಆಗ ಜಿಲ್ಲಾಧಿಕಾರಿಯೊಂದಿಗೆ ಶಾಸಕರು ಮಾತುಕತೆ ನಡೆಸಿದರು.
ಆದರೆ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಗರ ಪ್ರವೇಶಕ್ಕೆ ಅವಕಾಶ ನೀಡಲಿಲ್ಲ. ಡಿಸಿ ಸೂಚನೆ ಹಿನ್ನೆಲೆಯಲ್ಲಿ ರಸ್ತೆಯಲ್ಲೇ ಪುಸ್ತಕ ಬಿಡುಗಡೆ ಮಾಡಿದರು. ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ಪ್ರಮೋದ್ ಮುತಾಲಿಕ್, ನನ್ನ ವಿರುದ್ಧ ಉದ್ದೇಶಪೂರ್ವಕವಾಗಿ ಕ್ರಮ ಜರುಗಿಸಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಪರ ಸಂಘಟನೆ ನಾಯಕರಿಗೆ ಅಪಮಾನ ಮಾಡಲಾಗುತ್ತಿದೆ. ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವುದು ತಪ್ಪೇ ಎಂದು ಪ್ರಶ್ನಿಸಿದರು. ಮುತಾಲಿಕ್ ಪ್ರವೇಶಕ್ಕೆ ಆಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ತಡೆಯೊಡ್ಡಿದರು.