ಬೆಂಗಳೂರು: ಸಚಿವ ಕೆ.ಎನ್. ರಾಜಣ್ಣ ಅವರು ಡಿಕೆಶಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಪ-.ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗೆ ಶಿವರಾತ್ರಿಯೆಂದು ಈಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸರಿಯಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆರೋಪಿಸಿದ್ದಾರೆ.
ಈಶಾ ಫೌಂಡೇಶನ್‌ನ ಜಗ್ಗಿ ವಾಸುದೇವ್, ರಾಹುಲ್‌ಗಾಂಧಿ ಅವರು ಯಾರೂ ಅಂತಲೇ ಗೊತ್ತಿಲ್ಲ ಎಂದಿದ್ದಾರೆ. ಅಂತಹವರು ಆಹ್ವಾನ ಕೊಟ್ಟಿದ್ದಾರೆ ಎಂದು ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸರಿಯಲ್ಲ ಎಂದಿದ್ದಾರೆ.