ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಹಿಂದಿನಿಂದಲೂ ಹಿಂದುತ್ವದ ಒಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಡೆಯ ಬಗ್ಗೆ ಮಾತನಾಡಿದ್ದಾರೆ.
ಇತ್ತೀಚಿಗೆ ಅವರು ಸಾಫ್ಟ್ ಹಿಂದುತ್ವ ಪರಿಪಾಲನೆಗೆ ಮುಂದಾಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿ. ಕೆ.ಶಿವಕುಮಾರ್ ಅವರಿಗೆ ಮೊದಲಿನಿಂದಲೂ ಹಿಂದುತ್ವದ ಬಗ್ಗೆ ಗೌರವವಿದೆ. ಇದರಲ್ಲಿ ಅನುಮಾನವಿಲ್ಲ. ಹಿಂದುತ್ವವನ್ನು ಅವರು ಪಾಲಿಸುತ್ತಾರೆ. ಅದರಲ್ಲಿ ತಪ್ಪೇನಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.