ರಾಮನಗರ: ಆಟೋ (Auto) ಪಲ್ಟಿಯಾಗಿ ಆಟೋದಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna) ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಮದ್ದೂರಿನ (Maddur) ತಿಮ್ಮದಾಸ್ ಹೋಟೆಲ್ ಹತ್ತಿರ ಕುಣಿಗಲ್ ರಸ್ತೆಯ ತಿರುವಿನಲ್ಲಿ ಪ್ಯಾಸೆಂಜರ್ ಆಟೋವೊಂದು ಪಲ್ಟಿಯಾಗಿತ್ತು. ಈ ಸಂದರ್ಭದಲ್ಲಿ ಶಾಸಕರ ಬಾಲಕೃಷ್ಣ ಇದೇ ಮಾರ್ಗವಾಗಿ ತೆರಳುತ್ತಿದ್ದರು. ಅಪಘಾತ ಗಮನಿಸಿ, ಸ್ಥಳೀಯರ ಸಹಾಯದಿಂದ ಆಟೋವನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ ಆಟೋದಲ್ಲಿದ್ದ 6 ಮಂದಿ ಪ್ರಯಾಣಿಕರನ್ನು ಸಮಾಧಾನ ಪಡಿಸಿ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಅಲ್ಲದೇ, ಪಿಡಬ್ಲ್ಯೂಡಿ ಎಂಜಿನಿಯರ್‌ಗೆ ಕರೆಮಾಡಿ ತಿರುವಿನ ರಸ್ತೆಗೆ ಹಂಪ್ ನಿರ್ಮಾಣ ಮಾಡುವಂತೆ ಸೂಚನೆ ನೀಡಿದ್ದಾರೆ. ಶಾಸಕ ಹೆಚ್.ಸಿ.ಬಾಲಕೃಷ್ಣ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.