ಉಡುಪಿ: ಡಿ.ಕೆ. ಶಿವಕುಮಾರ್ ಸದ್ಯದಲ್ಲೇ ಸಿಎಂ ಆಗಲಿದ್ದಾರೆ ಎಂದು ಮಾಜಿ ಸಿಎಂ ಡಾ. ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಡಿಕೆಶಿಗೆ ಮೊದಲ ಬಾರಿಗೆ ನಾನೇ ಎಂಎಲ್ಎ ಟಿಕೆಟ್ ಕೊಡಿಸಿದೆ. ಆದರೆ, ಇಂದು ಅವರು ಅವಕಾಶಗಳನ್ನೆಲ್ಲ ಬಳಸಿಕೊಂಡು ದೊಡ್ಡ ನಾಯಕರಾಗಿದ್ದಾರೆ. ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಡಿ.ಕೆ.ಶಿವಕುಮಾರ್ ಅವರು ಗೊಮ್ಮಟೇಶ್ವರನಂತೆ ಎತ್ತರಕ್ಕೆ ಬೆಳೆಯಲಿ. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ಅವರು ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆಶಿ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿದ್ದಾರೆ.
ಶಿವಕುಮಾರ್ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ನಿಮ್ಮ ವಿರುದ್ಧ ಹೇಳಿಕೆಗಳು ಬರಬಹುದು, ಹೋಗಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಕೂಡ ಕಿವಿ ಮಾತು ಹೇಳಿದ್ದಾರೆ.