ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ (Budget Session 2025) ಆರಂಭವಾಗಲಿದ್ದು, ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಲಾಪ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ. ಹೀಗಾಗಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಸುತ್ತಮುತ್ತ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಜೆಡಿಎಸ್ ಕಾರ್ಯಕರ್ತರು ಗೃಹಲಕ್ಷ್ಮಿ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್ ಮಾಡುವಂತೆ ವಿಧಾನಸೌಧ ಮುತ್ತಿಗೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಬಿಜೆಪಿ ಕೂಡ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ವಿಧಾನಸೌಧದ ಸುತ್ತಮುತ್ತ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಯ ಹಿನ್ನೆಲೆಯಲ್ಲಿ 500ಕ್ಕೂ ಅಧಿಕ ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ.