ಬೆಂಗಳೂರು: ಮಾರ್ಚ್ 22ರಂದು ಕನ್ನಡಪರ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಖಾಸಗಿ ಬಸ್ ಮಾಲೀಕರು ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ಕರ್ನಾಟಕ ಬಂದ್ ವಿಚಾರದಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಬಂದ್ ಗೆ ಪೂರ್ಣ ಪ್ರಮಾಣದ ಬೆಂಬಲ ಸಿಗುತ್ತಿಲ್ಲ. ಈಗಾಗಲೇ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ಕೆಲವು ಸಂಘಟನೆಯ ನಾಯಕರು ಬಂದ್ ಗೆ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಕರವೇ ನಾರಯಣಗೌಡ ಬಣದಿಂದ ಬಂದ್ ಗೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಈಗ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆಗಳ ಒಕ್ಕೂಟ ಕೂಡ ಬಂದ್ ಗೆ ಬೆಂಬಲ ಇಲ್ಲ ಎಂದು ಹೇಳಿದೆ. ಆದರೆ, ಬಾಹ್ಯ ಬೆಂಬಲ ಇದೆ ಎಂದು ಖಾಸಗಿ ವಾಹನ ಮಾಲೀಕರ ಸಂಘಟನೆ ಹೇಳಿದೆ. ಹೋಟೆಲ್ ಅಸೋಸಿಯೇಷನ್ ಗಳು ಗೊಂದಲದ ನಿರ್ಧಾರ ಕೈಗೊಂಡಿದ್ದಾರೆ. ಬಾರ್ ಅಸೋಸಿಯೇಶನ್ ಕೂಡ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡುತ್ತಿದೆ. ಹೀಗಾಗಿ ಬಂದ್ ನಿರಸವಾಗುತ್ತದೆ ಎನ್ನಲಾಗುತ್ತಿದೆ.