ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿರುವ ರವಿಕುಮಾರ್ ಎನ್. ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಘೋಷಣೆ ಮಾಡುವಂತೆ ಮಾಡುವಂತೆ ಸಭಾಪತಿಗೆ ಕೋರಲಾಗಿದೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರದ ಮೂಲಕ ಸಭಾಪತಿಗೆ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ರವಿಕುಮಾರ್ ಎನ್. ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಿ ಆದೇಶಿಸುವಂತೆ ಕೋರಿದ್ದಾರೆ.