ಕೊಪ್ಪಳ: ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ನಡೆದಿದೆ.
ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ 4 ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿದ್ದಾರೆ.
ಕಳೆದ ಕೆಲವು ದಿನಗಳಿಂದಲೂ ಗಂಗವಾತಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದಾಗಿ ಅಲ್ಲಿನ ಜನ ಭಯಭೀತರಾಗಿದ್ದರು. ಹೀಗಾಗಿ ಅರಣ್ಯ ಇಲಾಖೆಗೆ ಸೆರೆ ಹಿಡಿಯಬೇಕೆಂದು ಮನವಿ ಮಾಡಲಾಗಿತ್ತು. ಗಂಗಾವತಿ ವಲಯ ಅರಣ್ಯಾಧಿಕಾರಿ ಸುಭಾಸ್ ಚಂದ್ರ ನೇತೃತ್ವದಲ್ಲಿ ಇಂದು ಚಿರತೆಯನ್ನು ಸೆರೆಹಿಡಿಯಲಾಗಿದೆ. ಚಿರತೆಯನ್ನು ಮರಳಿ ಕಾಡಿಗೆ ಬಿಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.