ದುಬೈ: ವಿಶ್ವಕಪ್ ಸೇಡು ತೀರಿಸಿಕೊಳ್ಳುವುದರ ಮೂಲಕ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ತಲುಪಿದೆ.
ಸೆಮಿಫೈನಲ್ ನಲ್ಲಿ ಭಾರತ (Team India) ತಂಡವು ಚಾಂಪಿಯನ್ಸ್ ಟ್ರೋಫಿ (Champions Trophy) ಫೈನಲ್ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 264 ರನ್ ಗಳನ್ನು ಗಳಿಸಿತ್ತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಭಾರತ ತಂಡವು 48.1 ಓವರ್‌ಗಳಲ್ಲಿ 267 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಭಾರತ ತಂಡದ ಪರ ವಿರಾಟ್ ಕೊಹ್ಲಿ 84 ರನ್ (98 ಎಸೆತ, 5 ಬೌಂಡರಿ), ಶ್ರೇಯಸ್ ಅಯ್ಯರ್ 45 ರನ್(62 ಎಸೆತ, 3 ಬೌಂಡರಿ), ಕೆಎಲ್ ರಾಹುಲ್ ಔಟಾಗದೇ 42 ರನ್ (34 ಎಸೆತ, 2 ಬೌಂಡರಿ, 2 ಸಿಕ್ಸ್), ಹಾರ್ದಿಕ್ ಪಾಂಡ್ಯ 28 ರನ್ (24 ಎಸೆತ, 1 ಬೌಂಡರಿ, 3 ಸಿಕ್ಸ್) ಸಿಡಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.
ಎರಡನೇ ಸೆಮಿಫೈನಲ್ ಪಂದ್ಯ ಮಂಗಳವಾರ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ನಡೆಯಲಿದ್ದು, ಈ ಪಂದ್ಯದಲ್ಲಿ ಗೆದ್ದವರು ಭಾರತ ಜೊತೆ ಭಾನುವಾರ ಫೈನಲ್ ನಲ್ಲಿ ಸೆಣಸಾಟ ನಡೆಸಲಿದ್ದಾರೆ.
ಆಸ್ಟ್ರೇಲಿಯಾ ಪರವಾಗಿ ನಾಯ ಸ್ವೀವ್ ಸ್ಮಿತ್ 73 ರನ್( 4 ಬೌಂಡರಿ, 1 ಸಿಕ್ಸ್), ಅಲೆಕ್ಸ್ ಕ್ಯಾರಿ 61 ರನ್( 57ಎಸೆತ, 8 ಬೌಂಡರಿ, 1 ಸಿಕ್ಸ್) ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 3 ವಿಕೆಟ್, ವರುಣ್ ಚಕ್ರವರ್ತಿ ಮತ್ತು ಜಡೇಜಾ ತಲಾ 2 ವಿಕೆಟ್ ಪಡೆದು ಮಿಂಚಿದರು.