ರಾಯಚೂರು: ಫಲಕದ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಮಾನ್ವಿ ತಾಲೂಕಿನ ಮಲ್ಲಿನ ಮಡಗು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಕೋಮಾ ಸ್ಥಿತಿಯಲ್ಲಿದ್ದಾನೆ. ಭೀಮಪ್ಪ (45) ಕೊಲೆಯಾಗಿರುವ ವ್ಯಕ್ತಿ. ರಮೇಶ್ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಎನ್ನಲಾಗಿದೆ. ಗ್ರಾಮದಲ್ಲಿ ರಸ್ತೆ ಕಾಮಗಾರಿ ವೇಳೆ ಈ ಅವಘಡ ಸಂಭವಿಸಿದೆ.
ಗ್ರಾಮದಲ್ಲಿ ರಸ್ತೆ ರಿಪೇರಿ ಕಾಮಗಾರಿ ಮಾಡಿಸುತ್ತಿದ್ದ ಯಂಕೋಬನಿಗೆ ಗ್ರಾಮದ ವೀರೇಶ್ ಕಿರಿಕಿರಿ ಮಾಡುತ್ತಿದ್ದ. ಇದರಿಂದ ಬೇಸತ್ತ ಯಂಕೋಬ ಹಾಗೂ ಭೀಮಪ್ಪ ವೀರೇಶ್‌ನಿಗೆ ವಾರ್ನಿಂಗ್ ಮಾಡಿದ್ದಾರೆ. ಆದರೆ, ವಿರೇಶ್ ಗುಂಪುಕಟ್ಟಿಕೊಂಡು ಬಂದು ಯಂಕೋಬ ಹಾಗೂ ಭೀಮಪ್ಪನ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಲಾಟೆಯಲ್ಲಿ ಯಂಕೋಬನಿಗೆ ಗಂಭೀರ ಗಾಯಗಳಾಗಿದ್ದವು.
ಈ ವೇಳೆ ಗುಂಪು ಘರ್ಷಣೆ ಉಂಟಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಭೀಮಣ್ಣ ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಯಂಕೋಬ, ರಮೇಶ್ ಸೇರಿದಂತೆ 9 ಜನರು ಗಾಯಗೊಂಡಿದ್ದು, ಮಾನ್ವಿ ಪೊಲೀಸ್ ಠಾಣೆಯಲ್ಲಿ ವಿರೇಶ್ ಸೇರಿದಂತೆ 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.