ದುಬೈ: ಭಾರತ ಕ್ರಿಕೆಟ್ ಕ್ಷೇತ್ರದ ಅತ್ಯುತ್ತಮ ಆಟಗಾರ ಯಾರೆಂಬ ಚರ್ಚೆ ಹಲವು ವರ್ಷಗಳಿಂದ ನಡೆಯುತ್ತಿದೆ. ಅದರಲ್ಲೂ ಸಚಿನ್ ವರ್ಸಸ್ ಕೊಹ್ಲಿ ಚರ್ಚೆ ಜೋರಾಗಿದೆ. ಸದ್ಯ ತಂಡದ ಹಿರಿಯ ಬ್ಯಾಟ್ಸ್‌ಮನ್ ಹಾಗೂ ಮಾಜಿ ನಾಯಕ ಕಪಿಲ್ ದೇವ್ (Kapil Dev) ವಿರಾಟ್ ಕೊಹ್ಲಿಯನ್ನು ಈಗಾಗಲೇ ಸಾಕಷ್ಟು ಮಾಜಿ ಕ್ರಿಕೆಟಿಗರು ಶ್ಲಾಘಿಸಿದ್ದಾರೆ. ಅಂತೆಯೇ ಇದೀಗ 1983ರ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಕಪಿಲ್ ದೇವ್, ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿಯನ್ನು ಅತ್ಯಂತ ಶ್ರೇಷ್ಠ ಬ್ಯಾಟ್ಸ್‌ಮನ್ ಎಂದು ಕೊಂಡಾಡಿದ್ದಾರೆ. ಹಾಗೆಂದು ಅವರು ಸಚಿನ್ ಅವರನ್ನು ಹೋಲಿಕೆ ಮಾಡಿಲ್ಲ.
ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಿಗೇ ವಿರಾಟ್ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಎಂದು ಅವರು ಬಣ್ಣಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಆಸ್ಟ್ರೇಲಿಯಾ ನೀಡಿದ್ದ 265 ರನ್‌ಗಳ ಗುರಿ ಹಿಂಬಾಲಿಸಿದ್ದ ಭಾರತ ತಂಡದ ಪರ ವಿರಾಟ್ ಕೊಹ್ಲಿ, 98 ಎಸೆತಗಳಲ್ಲಿ 84 ರನ್‌ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಭಾರತ ತಂಡಕ್ಕೆ 4 ವಿಕೆಟ್ ಗೆಲುವಿಗೆ ನೆರವು ನೀಡಿದ್ದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದರೊಂದಿಗೆ ತಾವು ಚೇಸ್ ಮಾಸ್ಟರ್ ಏಕೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದರು.
ಚೇಸಿಂಗ್ ವೇಳೆ ಮಹಾನ್ ಸಾಧನೆ
ವಿರಾಟ್ ಕೊಹ್ಲಿ ಚೇಸಿಂಗ್ ವೇಳೆ 8000 ರನ್‌ಗಳನ್ನು ಕಲೆ ಹಾಕಿದ್ದಾರೆ. ಭಾರತ ತಂಡದ ಮಾಜಿ ನಾಯಕ ಹಾಗೂ ಮಾಜಿ ಆಲ್‌ರೌಂಡರ್ ಕಪಿಲ್ ದೇವ್, ಇಂಡಿಯಾ ಟುಡೇ ಜೊತೆ ಮಾತನಾಡಯವಾಗ, ವಿರಾಟ್ ಕೊಹ್ಲಿಯನ್ನು ಶ್ಲಾಘಿಸಿದ್ದಾರೆ. ಪಂದ್ಯಗಳನ್ನು ಗೆಲ್ಲಿಸುವುದರ ಆಧಾರದ ಮೇಲೆ, ಎಂಎಸ್ ಧೋನಿಯನ್ನೇ ಕೊಹ್ಲಿ ಮೀರಿಸಿದ್ದಾರೆ. ಶ್ರೇಷ್ಠ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿಯೇ ಶ್ರೇಷ್ಠರಾಗಿದ್ದಾರೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಶ್ರೇಷ್ಠರಲ್ಲಿ ಶ್ರೇಷ್ಠ ಆಟಗಾರ ಕಪಿಲ್ ದೇವ್
“ದೊಡ್ಡ ಸವಾಲನ್ನು ಸ್ವೀಕರಿಸುವ ಮನೋಧರ್ಮವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಇದರಿಂದಲೇ ಅವರು ಶಕ್ತಿಯನ್ನು ಪಡೆದುಕೊಳ್ಳುತ್ತಾರೆ. ಈ ಮನೋಧರ್ಮದಲ್ಲಿ ಆಡುವ ಕೆಲವೇ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಒಬ್ಬರಾಗಿದ್ದಾರೆ. ಆದರೆ, ದಿನದಾಂತ್ಯದಲ್ಲಿ ಅವರು ಪ್ರತಿಭೆಯನ್ನು ಹೊಂದಿರುತ್ತಾರೆ ಹಾಗೂ ಪಂದ್ಯವನ್ನು ಗೆಲ್ಲಿಸುತ್ತಾರೆ. ಎಂಎಸ್ ಧೋನಿ ಇದನ್ನು ಬಳುಸುತ್ತಿದ್ದಾರೆಂದು ನಮಗೆ ತಿಳಿದಿದೆ ಆದರೆ, ಬೇರೆಯವರಿಗೆ ಹೋಲಿಕೆ ಮಾಡಿದರೆ, ವಿರಾಟ್ ಕೊಹ್ಲಿ ಒಂದು ಹೆಜ್ಜೆ ಮುಂದಿದ್ದಾರೆ,” ಎಂದು ಕಪಿಲ್ ದೇವ್ ಹೇಳಿದ್ದಾರೆ.