ಚಿಕ್ಕಬಳ್ಳಾಪುರ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಗೋಪಲ್ಲಿ ಗೇಟ್ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಮೂವರು ಅಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾರು ಹೊತ್ತಿ ಉರಿದ ಪರಿಣಾಮ ಒರ್ವ ಮಹಿಳೆ ಹಾಗೂ ಒರ್ವ ಪುರುಷ ಸಜೀವವಾಗಿ ದಹನಗೊಂಡಿದ್ದಾರೆ. ಮೃತರು ಆಂಧ್ರಪ್ರದೇಶದ ಮದನಪಲ್ಲಿ ಮೂಲದವರು ಎನ್ನಲಾಗಿದ್ದು, ಗುರುತು ಪತ್ತೆಯಾಗಿಲ್ಲ.