ಹಾಸನ: ಪಾಳು ಬಿದ್ದ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ಎಂಟು ಮಳಿಗೆಗಳಿದ್ದ ಹಳೆಯ ಕಟ್ಟಡ ಇದಾಗಿದೆ. ಪಾಳುಬಿದ್ದ ಕಟ್ಟಡ ಕುಸಿದುಬಿದ್ದ ಪರಿಣಾಮ ಅದರಡಿ ಕುಳಿತು ವ್ಯಾಪಾರ ಮಾಡುತ್ತಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೀದಿ ಬದಿ ವ್ಯಾಪಾರಿಗಳಾಗಿದ್ದ ಅಶಾ, ದೀಪಾ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಪಾಳು ಬಿದ್ದ ಕಟ್ಟಡದಲ್ಲಿ ಹಲವರು ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ. ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.