ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಕಾರ್ಯಕ್ರಮ ಇಂದು ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಶುಭಕೋರಿದ್ದಾರೆ.
ಅರಮನೆ ಮೈದಾನದಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಆಪ್ತರು, ಬಂಧುಗಳು ಆಗಮಿಸಿ ಜೋಡಿ ಆಶೀರ್ವದಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ಜಮೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭಕೋರಿದ್ದಾರೆ. ಈ ಜೋಡಿ ಮಾರ್ಚ್ 5 ಮತ್ತು 6 ರಂದು ಕನಕಪುರ ರೆಸಾರ್ಟ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು