ತುಮಕೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು (Student Arrest) ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಗರದ ಹೊಸ ಬಡಾವಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಮೂಲದ ಶರತ್ (25) ಬಂಧಿತ ವಿದ್ಯಾರ್ಥಿ ಎನ್ನಲಾಗಿದೆ. ಈತ ಮಹಿಳೆಯರ ಒಳ ಉಡುಪು ಕದಿಯುವುದನ್ನೇ ತನ್ನ ಕಾಯಕವಾಗಿಸಿಕೊಂಡಿದ್ದ. ಸುತ್ತಮುತ್ತಲಿನ ಮನೆಗಳಲ್ಲಿ ಮಹಿಳೆಯರ ಒಳ ಉಡುಪು ಕದಿಯುವ ಕೃತ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಹೀಗಾಗಿ ಈತನ ವಿರುದ್ಧ ದೂರು ದಾಖಲಿಸಲಾಗಿತ್ತು. ಸದ್ಯ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.
ಶರತ್ ಬಿಇ ವ್ಯಾಸಂಗ ಮಾಡುತ್ತಿದ್ದ. ಬಾಡಿಗೆ ರೂಮ್ ನಲ್ಲಿ ವಾಸಿಸುತ್ತಿದ್ದ. ನೀಲಿಚಿತ್ರ ನೋಡುವುದನ್ನು ಒಂದು ಚಟವಾಗಿ ಬೆಳೆಸಿಕೊಂಡಿದ್ದ ಎಂಬುವ ವಿಷಯವನ್ನು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅಶ್ಲೀಲ ಚಿತ್ರ ನೋಡಿದ ಅಮಲಿನಲ್ಲಿ ಮನೆಗಳ ಮೇಲೆ ಒಣಗಿ ಹಾಕುತ್ತಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಇದರಿಂದ ತನ್ನ ಕಾಮಸುಖ ಅನುಭವಿಸುತ್ತಿದ್ದ ಎಂದು ತಿಳಿದು ಬಂದಿದೆ.
ಈತ ಅಶೋಕನಗರ, ಎಸ್.ಎಸ್. ಪುರಂ, ಎಸ್ ಐಟಿ ಬ್ಯಾಕ್ ಗೇಟ್ ಸೇರಿದಂತೆ ಹಲವು ಕಡೆಗಳಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುವ ಚಾಳಿ ರೂಢಿಸಿಕೊಂಡಿದ್ದ. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.