ಬೆಂಗಳೂರು: ಕೆಪಿಎಸ್ಸಿ ವಿರುದ್ಧ ಇಂದಿನಿಂದ ಕರವೇ ಅಹೋರಾತ್ರಿ ಹೋರಾಟ ನಡೆಸುತ್ತಿದೆ. ಇಂದಿನಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆದಿದೆ.
ಕೆಎಎಸ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದವರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸುವುದರ ಮೂಲಕ ಅದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೆಪಿಎಸ್ಸಿ ಪರೀಕ್ಷೆಯಲ್ಲಿ 60ಕ್ಕೂ ಅಧಿಕ ಪ್ರಶ್ನೆಗಳನ್ನು ಕನ್ನಡದಲ್ಲಿ ತಪ್ಪಾಗಿ ಮುದ್ರಿಸಲಾಗಿದೆ. ಇದನ್ನು ಖಂಡಿಸಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ ಕರವೇ ಕರೆ ನೀಡಿದೆ.
ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11.30ಕ್ಕೆ ಪ್ರತಿಭಟನೆ ಆರಂಭವಾಗಲಿದೆ. ಪ್ರತಿಭಟನೆಯಲ್ಲಿ ಸಾವಿರಾರು ಅಭ್ಯರ್ಥಿಗಳು ಹಾಗೂ ಕರವೇ ಹೋರಾಟಗಾರರು ಭಾಗವಹಿಸುವ ಸಾಧ್ಯತೆ ಇದೆ.