I
ಬೆಂಗಳೂರು: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಈ ಟೂರ್ನಿಯಲ್ಲಿ ಅತಿ ಗರಿಷ್ಠ ಟ್ರೋಫಿಗಳನ್ನು ಗೆದ್ದಿದೆ. ಇದು ಮೂರನೇ ಕಿರೀಟ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ನಲ್ಲಿ ಕಿವೀಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ ಭಾರತ ನೂತನ ಚರಿತ್ರೆ ಸೃಷ್ಟಿಸಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಮೂರು ಬಾರಿ ಟ್ರೋಫಿ (2002, 2013, 2025) ಗೆದ್ದ ಮೊದಲ ತಂಡದ ಎಂಬ ಹಿರಿಮೆಗೆ ಪಾತ್ರವಾಗಿದೆ.
ನ್ಯೂಜಿಲೆಂಡ್ ನೀಡಿದ್ದ 252 ರನ್ಗಳ ಗರಿ ಬೆನ್ನಟ್ಟಿದ ಭಾರತ, 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 252 ರನ್ ಬಾರಿಸಿ ಗೆಲುವು ಸಾಧಿಸಿತು. ಈ ಗೆಲುವಿನ ಬಳಿಕ ಭಾರತದ ಗಣ್ಯರೆಲ್ಲರೂ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಮೋದಿ ಹೇಳಿದ್ದೇನು?
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು.
ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್… Yeeeeehhhhh… ಎಂದು ಸಚಿ್ನ್ ಬರೆದಿದ್ದಾರೆ.
ರಾಷ್ಟ್ರಪತಿ ಭವನ
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ ಮೂರು ಬಾರಿ ಟ್ರೋಫಿ ಗೆದ್ದ ಏಕೈಕ ತಂಡವಾಗಿದೆ. ಕ್ರಿಕೆಟ್ ಇತಿಹಾಸವನ್ನು ಸೃಷ್ಟಿಸಿದ್ದಕ್ಕಾಗಿ ಆಟಗಾರರು, ಆಡಳಿತ ಮಂಡಳಿ ಮತ್ತು ಸಹಾಯಕ ಸಿಬ್ಬಂದಿ ಅತ್ಯುನ್ನತ ಪ್ರಶಂಸೆಗೆ ಅರ್ಹರು. ಭಾರತೀಯ ಕ್ರಿಕೆಟ್‌ಗೆ ಉಜ್ವಲ ಭವಿಷ್ಯ ಸಿಗಲಿ ಎಂದು ನಾನು ಬಯಸುತ್ತೇನೆ ಎಂದು ದ್ರೌಪದಿ ಮುರ್ಮು ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ
ಅದ್ಭುತ ಗೆಲುವು, ಹುಡುಗರೇ! ನಿಮ್ಮಲ್ಲಿ ಪ್ರತಿಯೊಬ್ಬರೂ ಕೋಟ್ಯಂತರ ಹೃದಯಗಳನ್ನು ಹೆಮ್ಮೆಯಿಂದ ತುಂಬಿಸಿದ್ದೀರಿ. ಅದ್ಭುತ ವೈಯಕ್ತಿಕ ಪ್ರದರ್ಶನ ಮತ್ತು ಮೈದಾನದಲ್ಲಿ ಸಂಪೂರ್ಣ ಪ್ರಾಬಲ್ಯದಿಂದ ಗುರುತಿಸಲ್ಪಟ್ಟ ಟೂರ್ನಮೆಂಟ್‌ನಲ್ಲಿ ಟೀಮ್‌ಇಂಡಿಯಾದ ಅದ್ಭುತ ಓಟವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಅಭಿನಂದನೆಗಳು, ಚಾಂಪಿಯನ್‌ಗಳು! ಎಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಅಮಿತ್ ಶಾ
ಇತಿಹಾಸ ಬರೆದ ಗೆಲುವು. ಐಸಿಸಿ #ChampionsTrophy2025 ರಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು. ನಿಮ್ಮ ಉರಿಯುತ್ತಿರುವ ಶಕ್ತಿ ಮತ್ತು ಮೈದಾನದಲ್ಲಿನ ಅಜೇಯ ಪ್ರಾಬಲ್ಯವು ದೇಶವನ್ನು ಹೆಮ್ಮೆಪಡುವಂತೆ ಮಾಡಿತು, ಕ್ರಿಕೆಟ್ ಶ್ರೇಷ್ಠತೆಗೆ ಹೊಸ ಮಾನದಂಡವನ್ನು ಸ್ಥಾಪಿಸಿತು. ನೀವು ಯಾವಾಗಲೂ ಅತ್ಯುತ್ತಮ ಬಣ್ಣಗಳಿಂದ ಹೊರಬರಲಿ ಎಂದು ಗೃಹ ಮಂತ್ರಿ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ. ಭಾರತ ಗೆದ್ದಿದೆ.. ಈ ಸಲ ಕಪ್ ನಮ್ದೆ..ಎಂದು ಸಿಎಂ ಬರೆದುಕೊಂಡಿದ್ದಾರೆ.