ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮುಗಿಯುವ ಹಂತಕ್ಕೆ ಬಂದಿದ್ದು, ವಿದ್ಯಾರ್ಥಿಗಳು ಪರೀಕ್ಷೆ ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಬೇಸಿಗೆಯಲ್ಲೂ ಬಿಸಿಯೂಟ ನೀಡುವುದಾಗಿ ಸರ್ಕಾರ ಘೋಷಿಸಿದೆ.
2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ (Summer vacation) ಅವಧಿಯಲ್ಲಿ ಬರಪೀಡಿತ (Drought hit) ಎಂದು ಗುರುತಿಸಲಾಗಿರುವ 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1ರಿಂದ 8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ (Mid Day Meal) ನೀಡಬೇಕು ಎಂದು ಸರ್ಕಾರ (Karnataka Government) ಹೇಳಿದೆ. ಇದಕ್ಕಾಗಿ ಒಟ್ಟು ರೂ. 7393.78 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಏಪ್ರಿಲ್- ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1 ರಿಂದ8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟಕ್ಕೆ ಅವಕಾಶ ಕಲ್ಪಿಸಲಾಗಿದೆ.