ಬೆಂಗಳೂರು: ರಾಜ್ಯದಲ್ಲಿ ಸೂರ್ಯನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ.
ಕಲಬುರಗಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಗರಿಷ್ಠ 38.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 34.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ 34.5 ಡಿ.ಸೆಲ್ಸಿಯಶ್ ನಷ್ಟು ಉಷ್ಣಾಂಶ ದಾಖಲಾಗಿದೆ.
ಇದೇ ಅವಧಿಯಲ್ಲಿ ವಿಜಯಪುರದಲ್ಲಿ , ರಾಯಚೂರು, ಬೆಳಗಾವಿ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ದಾಖಲಾಗಿದೆ. ಚಾಮರಾಜನಗರ, ಹಾವೇರಿ, ಧಾರವಾಡ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ 36 ಡಿ.ಸೆಲ್ಸಿಯಸ್ ನಷ್ಟು ಉಷ್ಣಾಂಶ ದಾಖಲಾಗಿದೆ. ಬೇಸಿಗೆ ಬೇಗುದಿಯ ಮಧ್ಯೆಯೂ ರಾಜ್ಯದಲ್ಲಿ ನಾಳೆಯಿಂದ ಪೂರ್ವ ಮುಂಗಾರು ಮಾರುತಗಳು ಕೂಡ ಚುರುಕುಗೊಳ್ಳುವ ಸಾಧ್ಯತೆ ಇದೆ.
ಹೀಗಾಗಿ ನಾಳೆಯಿಂದ ಮಾರ್ಚ್14ರ ವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.