ಬೆಂಗಳೂರು: ನಗರದಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ನೀಡಿ ಗೌರವಿಸಲಾಯಿತು.
ಸಿಎಂ ಸಿದ್ದರಾಮಯ್ಯ ಅವರು ಶಬಾನಾ ಅಜ್ಮಿ ಅವರಿಗೆ ತಮ್ಮ ಕಾವೇರಿ ನಿವಾಸದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಹಾಗೂ 10 ಲಕ್ಷ ರೂ. ಚೆಕ್ ನೀಡಿ ಗೌರವಿಸಲಾಯಿತು. ಈ ವೇಳೆ ಕವಿ ಜಾವೇದ್ ಅಖ್ತರ್ ಈ ಸಂದರ್ಭದಲ್ಲಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು, “ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾದು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಸೇರಿದಂತೆ ಹಲವರು ಇದ್ದರು.