ಕೋಲಾರ: ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಆಪ್ತ ಹಾಗೂ ಮುಳಬಾಗಿಲು (Mulbagal) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ ಹೃದಯಾಘಾತ (Heart Attack)ಕ್ಕೆ ಬಲಿಯಾದವರು.
ಭಾನುವಾರ ರಾತ್ರಿ ನೀಲಕಂಠೇಗೌಡ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಕುಟುಂಬಸ್ಥರು ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನೀಲಕಂಠೇಗೌಡರು ಈ ಹಿಂದೆ ಮುಳಬಾಗಿಲು ತಾಲೂಕು ಪಂಚಾಯತಿ ಅಧ್ಯಕ್ಷರಾಗಿದ್ದರು. ಈಗ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದರು. ಮುಳಬಾಗಿಲು ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.