ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಲಿದೆಯೇ ಎಂಬ ಆತಂಕ ಕಾಡುತ್ತಿದೆ. ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಜಮೀಹ್ ಅಹ್ಮದ್ ಖಾನ್ ಹಾಗೂ ಮಾಂಸ ಮಾರಾಟಗಾರರು ಬಿಬಿಎಂಪಿ ಪಶುಸಂಗೋಪನೆ ಇಲಾಖೆಗೆ ದನದ ಮಾಂಸ ಮಾರಾಟಕ್ಕೆ ಪರವಾನಿಗೆ ನೀಡಬೇಕೆಂದು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಾರ್ಚ್ 6ರಂದು ವಿಕಾಸೌಧದಲ್ಲಿ ನಡೆದ ಸಭೆಯಲ್ಲಿ ವ್ಯಾಪಾರಿಗಳಿಂದ ಸಚಿವ ಜಮೀರ್ ಗೆ ಈ ಕುರಿತು ಮನವಿ ಮಾಡಲಾಗಿದೆ ಎನ್ನಲಾಗಿದೆ. ಸಭೆಯಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು, ರಾಮನಗರ ಶಾಸಕ, ಚಾಮರಾಜಪೇಟೆ ಶಾಸಕ, ಶಿವಾಜಿನಗರ ಶಾಸಕರು ಸೇರಿದಂತೆ ಸಿಎಂ ಕಾರ್ಯದರ್ಶಿ ಭಾಗಿಯಾಗಿದ್ದರು. ಈ ವೇಳೆ ಗೋಮಾಂಸ ಮಾರಾಟಕ್ಕೆ ಬಿಬಿಎಂಪಿ ಹಾಗೂ ನಗರಸಭೆ, ಗ್ರಾಮ ಪಂಚಾಯತಿಗಳ ಮೂಲಕ ಪರವಾನಗಿ ನೀಡಬೇಕೆಂದು ಅಧಿಕಾರಿಗಳಿಗೆ ಒತ್ತಡ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಈ ವೇಳೆ ಪ್ಯಾಪಾರಿಗಳು ದನದ ಮಾಂಸ ಮಾರಾಟ ಎಂದೇ ಲೈಸೆನ್ಸ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಈ ವೇಳೆ ಸಚಿವ ಜಮೀರ್ ಅಹ್ಮದ್, ಈ ಬಗ್ಗೆ ಕಾನೂನಿನ ಚೌಕಟ್ಟಿನ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂಬುವುದು ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.