ಬೆಂಗಳೂರು: ಸಿಲಿಕಾನ್ ಸಿಟಿಗೆ ಮತ್ತೆ ಕಸದ ಸಮಸ್ಯೆ ತಲೆ ದೋರಿದೆ.
ಬೆಂಗಳೂರಿನಿಂದ ಹೋಗಿ ಕಸ ಡಂಪ್ ಮಾಡುತ್ತಿರುವುದಕ್ಕೆ ಕಣ್ಣೂರು ಕಸದ ಘಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ರಸ್ತೆಯಲ್ಲೇ ಗ್ರಾಮಸ್ಥರು ಲಾರಿಗಳನ್ನು ನಿಲ್ಲಿಸಿದ್ದಾರೆ. ಸುಮಾರು 500ಕ್ಕೂ ಅಧಿಕ ಕಸದ ಲಾರಿಗಳು ರಸ್ತೆ ಮಧ್ಯೆಯೇ ನಿಂತಿವೆ.
ನಮಗೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ಹೀಗಾಗಿ ಇಲ್ಲಿ ಕಸ ಡಂಪ್ ಮಾಡಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಣ್ಣೂರು ಗ್ರಾಪಂ ಅಧ್ಯಕ್ಷ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.