ಬೆಂಗಳೂರು: ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣದಲ್ಲಿ ಈಗಾಗಲೇ ನಟಿ ರನ್ಯಾರಾವ್ (Ranya Rao) ಜೈಲು ಪಾಲಾಗಿದ್ದಾರೆ. ಆದರೆ, ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ತಾತ್ಕಾಲಿಕವಾಗಿ ಬಂಧನದಿಂದ ಪಾರಾಗಿದ್ದಾರೆ.
ಜತಿನ್ ಹುಕ್ಕೇರಿ ಹೈಕೋರ್ಟ್ (Karnataka High COurt ಮೆಟ್ಟಿಲೇರಿದ್ದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಾನೂನಿನ ಪ್ರಕ್ರಿಯೆ ಪಾಲಿಸದೆ ಬಂಧಿಸದಂತೆ ಮಹತ್ವದ ಆದೇಶ ನೀಡಿದೆ.
ವಾದ ಆಲಿಸಿದ ಹೈಕೋರ್ಟ್, ಕಾನೂನಿನ ಪ್ರಕ್ರಿಯೆ ಪಾಲಿಸದೆ ಜತಿನ್ರನ್ನು ಬಂಧಿಸದಂತೆ ಆದೇಶ ಹೊರಡಿಸಿದೆ. ಹೀಗಾಗಿ ಪತಿ ತಾತ್ಕಾಲಿಕ ರಿಲೀಫ್ ಪಡೆದಿದ್ದಾರೆ. ಆದರೆ, ರನ್ಯಾ ಪ್ರಕರಣದ ಹಿಂದೆ ದೊಡ್ಡ ದೊಡ್ಡ ಕುಳಗಳೇ ಇರುವುದು ಬಹಿರಂಗವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ಗಂಡನಿಂದ ಮಾಹಿತಿ ಸೋರಿಕೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮದುವೆಯಾದ ಎರಡೇ ತಿಂಗಳಿಗೆ ರನ್ಯಾ ದುಬೈಗೆ ಹೋಗಿ ಬರುತ್ತಿದ್ದಳು. ಇದು ಸಂಸಾರದ ಬಿರುಕಿಗೆ ಕಾರಣವಾಗಿತ್ತು. ರನ್ಯಾ ಪದೇ ಪದೆ ವಿದೇಶಕ್ಕೆ ಹೋಗಿ ಬರುತ್ತಿದ್ದರಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಈ ಜಗಳ ಡೈರ್ವಸ್ ಹಂತಕ್ಕೂ ಹೋಗಿತ್ತು ಎನ್ನಲಾಗಿದೆ. ಹೀಗಾಗಿ ರನ್ಯಾ ಪತಿ ಮಾಹಿತಿ ಸೋರಿಕೆ ಮಾಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನು ರನ್ಯಾ ಪತಿ ಸಚಿವರೊಬ್ಬರಿಗೆ ನೀಡಿದ್ದು, ಆ ಸಚಿವರು ಡಿಆರ್ ಐ ಅಧಿಕಾರಿಗಳಿಗೆ ಕೊಟ್ಟಿದ್ದಾರೆಂಬ ಶಂಕೆ ವ್ಯಕ್ತವಾಗುತ್ತಿದೆ.