ಬೆಂಗಳೂರು: ನೀರು ಹಿಡಿಯುವಾಗ ಕರೆಂಟ್ ಶಾಕ್ ನಿಂದಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾರ್ಕೆಟ್ ರಸ್ತೆಯಲ್ಲಿನ ಆನಂದಪುರದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿನ ಮನೆಗಳಿಗೆ ನೀರಿನ ಸಂಪರ್ಕ ನೀಡಿಲ್ಲ. ದೊಡ್ಡ ಪೈಪ್ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಈ ವೇಳೆ ಮೋಟರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆ.
ಮಹಿಳೆ ಸಾವನ್ನಪ್ಪುತ್ತಿದ್ದಂತೆ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.



















