ಬೆಂಗಳೂರು: ಮನೆಯಲ್ಲಿಟ್ಟಿದ್ದ ಸಿಲಿಂಡರ್ ಅನಿಲ ಸೋರಿಕೆಯಿಂದಾಗಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಗರದ ಬೈಯಪ್ಪನಹಳ್ಳಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅಲ್ಲದೇ, ಮನೆಯಲ್ಲಿಟ್ಟಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರ ಛಿದ್ರವಾಗಿದೆ. ಬೈಯ್ಯಪ್ಪನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ.
ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಮಂಜುನಾಥ್(34), ಪವಿತ್ರಾ(27), ಅಣ್ಣೇಶ್(33), ಮಮತಾ(32),ಇಶಾನ್(3), ಹನುಮಂತಪ್ಪ (70) ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.