ಉಡುಪಿ: ವಿಚಾರಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ನಟೋರಿಯಸ್ ರೌಡಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ.
ಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು ನೀಡಲಾಗಿದೆ. ಈ ಘಟನೆ ಹಿರಿಯಡ್ಕ ಹತ್ತಿರದ ಗುಡ್ಡೆ ಅಂಗಡಿ ಹತ್ತಿರ ನಡೆದಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಹಾಸನದ ಚನ್ನರಾಯಪಟ್ಟಣದಲ್ಲಿ ಬಂಧಿಸಿದ್ದರು. ವಿಚಾರಣೆಗೆಂದು ಉಡುಪಿಗೆ ಕರೆದುಕೊಂಡು ಬರುತ್ತಿದ್ದ ವೇಳೆ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಇಸಾಕ್ ಯತ್ನಿಸಿದ್ದಾನೆ.
ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಮೂತ್ರ, ವಾಂತಿ ಬರುತ್ತದೆ ಎಂದು ಹೇಳಿ ಪರಾರಿಯಾಗಲು ಯತ್ನಿಸಿದ್ದರು ಎನ್ನಲಾಗಿದೆ. ಸದ್ಯ ಆರೋಪಿಗಳ ವಿಚಾರಣೆ ನಡೆಯುತ್ತಿದೆ.