ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಸಾಗಾಣಿಕೆಗೆ ಪರೋಕ್ಷವಾಗಿ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ಡಿಜಿಪಿ ರಾಮಚಂದ್ರ ರಾವ್, ಸರ್ಕಾರ ರಚಿಸಿರುವ ತನಿಖಾ ತಂಡದ ಮುಖ್ಯಸ್ಥ ಗೌರವ್ ಗುಪ್ತರ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಸದ್ಯ ರಾಮಚಂದ್ರ ರಾವ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದು, ಅದರ ಪ್ರಕಾರವೇ ರಾಮಚಂದ್ರ ರಾವ್, ತನಿಖಾಧಿಕಾರಿಯ ಮುಂದೆ ಹಾಜರಾಗಲಿದ್ದಾರೆ.