ಚಿಕ್ಕೋಡಿ: ಮಹಾರಾಷ್ಟ್ರ(Maharashtra) ಪುಂಡರ ಹಾವಳಿ ಮಿತಿ ಮೀರುತ್ತಿದೆ. ಗಡಿ ಸೇರಿದಂತೆ ಮಹಾರಾಷ್ಟ್ರದಲ್ಲಿ ಮತ್ತೆ ಕ್ಯಾತೆ ತೆಗೆಯುವ ಕಾರ್ಯ ನಡೆಯುತ್ತಲೇ ಇದೆ. ಕೆಎಸ್‍ಆರ್‌ಟಿಸಿ (KSRTC) ಬಸ್ ಮೇಲೆ ಈಗ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯಲ್ಲಿ ಈ ಘಟನೆ ನಡೆದಿದೆ. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಣ್ಣ ಎರಚುವ ವೇಳೆ ಬಸ್ ಹಾಗೂ ಇತರ ವಾಹನಗಳಿಗೆ ಮಸಿ ಎರಚಿ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಸ್ ಇಚಲಕರಂಜಿಯಿಂದ ಚಿಕ್ಕೋಡಿಗೆ ತೆರಳುತ್ತಿತ್ತು ಎನ್ನಲಾಗಿದೆ.
ಮಹಾರಾಷ್ಟ್ರ ಮರಾಠ ಪುಂಡರು ಇತ್ತೀಚೆಗಷ್ಟೇ ಕನ್ನಡ ಮಾತಾಡು ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದರು. ಈಗ ಮಹಾರಾಷ್ಟ್ರಕ್ಕೆ (Maharashtra) ಸಂಚರಿಸುವ ಬಸ್ ಗಳನ್ನು (Karnatak Bus) ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಬಣದ ಶಿವಸೇನೆ (Shiv Sena) ಪುಂಡರು ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿಯುತ್ತಿದ್ದಾರೆ.