ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಅರೆಸ್ಟ್ ಆಗಿರುವ ರನ್ಯಾ ರಾವ್ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿರುವ ಡಿಆರ್ ಐ ಅಧಿಕಾರಿಗಳು ರನ್ಯಾ ಆಪ್ತ ಸ್ನೇಹಿತನನ್ನು ಕೂಡ ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಈಗ ಕೋರ್ಟ್ ಆತನಿಗೂ ನ್ಯಾಯಾಂಗ ಬಂಧನ ವಿಧಿಸಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ತರುಣ್ ರಾಜ್ ನನ್ನು ಡಿಆರ್ ಐ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ತರುಣ್ ರಾಜ್ ವಿಚಾರಣೆ ಮುಗಿಸಿದ ಅಧಿಕಾರಿಗಳು, ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದರು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ತರುಣ್ ಕೊಂಡೂರು ರಾಜುನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.