ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ತೆರಿಗೆ ಹೊರೆ ಎದುರಾಗಿದೆ.
ಎಲ್ಲ ಬಳಕೆಯ ವಸ್ತುಗಳ ಮೇಲೆ ತೆರಿಗೆ ಹೇರಿ, ಜನರಿಗೆ ಹೊರೆ ಮಾಡಿದ್ದ ಸರ್ಕಾರ ಈಗ ಕಸದ ಮೇಲೆಯೂ ತೆರಿಗೆ ವಿಧಿಸಿದೆ. ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯು ಕಸದ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದೆ. ಹೀಗಾಗಿ ಮನೆ, ಮನೆ ಕಸ ಸಂಗ್ರಹಿಸುವ ಕಾರ್ಯಕ್ಕೆ ಜನರು ಹೆಚ್ಚಿಗೆ ತೆರಿಗೆ ನೀಡಬೇಕಿದೆ.
ಪ್ರತಿ ತಿಂಗಳು ಕಸ ಸಂಗ್ರಹ ಹಾಗೂ ವಿಲೇವಾರಿ ವೆಚ್ಚ ಅಂತ ಹಣ ಲೂಟಿ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಈಗಾಗಲೇ ನಗರಾಭಿವೃದ್ಧಿ ಇಲಾಖೆಗೆ BSWML ನಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಟ್ಟಡದ ವಿಸ್ತೀರ್ಣದ ಮೇಲೆ ಶುಲ್ಕ ನಿಗದಿ ಮಾಡಲಾಗಿದೆ.
600 ಚದರ ಅಡಿವರೆಗಿನ ಕಟ್ಟಡಗಳಿಗೆ ತಿಂಗಳಿಗೆ 10 ರೂ., 600 ಚದರ ಅಡಿಯಿಂದ 1 ಸಾವಿರ ಚದರ ವರೆಗಿನ ಕಟ್ಟಡಗಳಿಗೆ ತಿಂಗಳು 50 ರೂ, 1 ಸಾವಿರದಿಂದ 2 ಸಾವಿರ ಚದರ ಅಡಿಗಳವರೆಗಿನ ತಿಂಗಳಿಗೆ 100 ರೂ, 2 ಸಾವಿರದಿಂದ 3 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 150 ರೂ, 3 ಸಾವಿರದಿಂದ 4 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 200 ರೂ, 4 ಸಾವಿರ ಚದರ ಅಡಿಗಳ ಮೇಲ್ಪಟ್ಟ ಕಟ್ಟಡಗಳಿಗೆ ತಿಂಗಳಿಗೆ 400 ರೂ. ತೆರಿಗೆ ವಿಧಿಸಲಾಗಲು ನಿರ್ಧರಿಸಲಾಗಿದೆ. ಒಂದು ವೇಳೆ ಈ ಪ್ರಸ್ತಾವನೆಗೆ ಮಾನ್ಯತೆ ಸಿಕ್ಕರೆ, ಘನತ್ಯಾಜ್ಯ ನಿರ್ವಹಣೆ ಸಂಸ್ಥೆಗೆ ವಾರ್ಷಿಕ 600 ಕೋಟಿ ರೂ. ಆದಾಯ ಹರಿದು ಬರಲಿದೆ.